Posts

Showing posts with the label ನಾಗರ ಪಂಚಮಿ - Nagara Panchami

ನಾಗರ ಪಂಚಮಿ - Nagara Panchami

ನಾಗರ ಪಂಚಮಿ ಚಾಂದ್ರಮಾನದ ಐದನೆಯ ತಿಂಗಳೇ ಶ್ರಾವಣ. ಈ ತಿಂಗಳಿನ ಆರಂಭದ ಹಬ್ಬವೇ ನಾಗರ ಪಂಚಮಿ.  ನಮ್ಮ ನಾಡಿಗೆ ದೊಡ್ಡ ಹಬ್ಬ. ಪುರಾಣಗಳಲ್ಲಿಯೂ ಉಲ್ಲೇಖಿತವಾದ ನಮ್ಮ ಈ ಪರಶುರಾಮ ಸೃಷ್ಟಿಯ ವಿಶೇಷ ಹಬ್ಬವಿದು ಎನ್ನುವುದರಲ್ಲಿಯೇ ತುಂಬಾ ಔಚಿತ್ಯವಿದೆ. ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು ಇಂದು ನಾಗರಿಕರೆನಿಸಿದ ವಿದ್ಯಾವಂತರ ಮನೆ ಮನಗಳಲ್ಲೂ ಆಳವಾಗಿ ಬೇರೂರಿ ನಿಂತಿದೆ. ನಾಗರ ಪಂಚಮಿಯಂದು ನಾಗದೇವತೆಗೆ ತನು ಹಾಕುವಲ್ಲಿಂದ, ತಂಬಿಲ ನೀಡುವಲ್ಲಿಂದ ತೊಡಗಿ ಅಷ್ಟ ಪವಿತ್ರ ನಾಗಮಂಡಲದಂತಹ ವಿಶಿಷ್ಟ ಆರಾಧನಾ ಕ್ರಮಗಳ ವರೆಗೆ ಅವರವರ ಶ್ರದ್ಧಾಭಕ್ತಿ, ಆರ್ಥಿಕ ಸ್ಥಿತಿಗತಿಗಳನ್ನು ಅವಲಂಬಿಸಿ ನಾಗಾರಾಧನೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ನಾಗಾರಾಧನೆಯು ಒಂದರ್ಥದಲ್ಲಿ ಪ್ರಕೃತಿಯ ಆರಾಧನೆ. ನಾಗಾರಾಧನೆ ಇದೊಂದು ಪ್ರಾಚೀನ ಆರಾಧನೆ. ವೇದದ ಸೊಲ್ಲುಗಳು ನಾಗಪೂಜೆಯ ಪ್ರಾಚೀನತೆಯನ್ನು ತಿಳಿಯ ಪಡಿಸುತ್ತವೆ. ನಾಗ ದೇವರು ಅಗಣಿತ ಮಹಿಮೆಯ ಶಕ್ತಿಯೆಂದು ಸರ್ಪ ಸೂಕ್ತಗಳ ವರ್ಣನೆಯಿದೆ. "ಅನಂತಶ್ಚಾಸ್ಮಿ ನಾಗಾನಾಂ" – ಶ್ರೀ ಕೃಷ್ಣ ಗೀತೆಯಲ್ಲಿ ತಿಳಿಸಿದ ಈ ಮಾತು ಸದಾ ಸ್ಮರಣೀಯವಾದುದು. ನಮ್ಮ ಭಾರತದ ಹರಪ್ಪ - ಮೊಹೆಂಜೊದಾರೋಗಳಲ್ಲಿ ಲಭ್ಯವಾದ ನಾಗ ಮುದ್ರೆಗಳು, ಗೋಕರ್ಣದ ನಾಗ ಬಂಧ ಚಿತ್ರ, ಬನವಾಸಿಯಲ್ಲಿರುವ ಕ್ರಿ. ಶ. ಮೂರನೆಯ ಶತಮಾನ...